ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 28,591 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,32,36,921ಕ್ಕೆ ಏರಿಕೆಯಾಗಿದೆ.
ಆದರೆ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 338 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 442655 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 384921 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 34848 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32409345 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 15,30,125 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 72,86,883 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 73,82,07,378 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.