ಬಳ್ಳಾರಿ: ಜಾತಿ ಗಣತಿ ವಿಚಾರವಾಗಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾತಿಗಣತಿ ವರದಿಯನ್ನು ಚುನಾವಣೆ ಬರುವುದರೊಳಗೆ ಮಂಡಿಸುವುದಾಗಿ ಹೇಳಿದ್ದರು. ಆದರೆ ಈಗ ನಮ್ಮ ಸರ್ಕಾರ ಇದ್ದಾಗ ಕಾಂತರಾಜು ವರದಿ ಕೊಡಲಿಲ್ಲ ಎಂದು ಆರೋಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಈಶ್ವರಪ್ಪ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿಯೂ ಜಾತಿಗಣತಿ ವರದಿ ಬಿಡುಗಡೆ ಮಾಡಲಿಲ್ಲ. ಈಗ ಕುಮಾರಸ್ವಾಮಿಯವರು ಬೇಡ ಅಂದರು ಎನ್ನುತ್ತಿದ್ದಾರೆ. ಕುಮಾರಸ್ವಾಮಿ ಕೇಳಿದರೆ ಸಿದ್ದರಾಮಯ್ಯ ನನ್ನನ್ನು ಕೇಳಿಯೇ ಇಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ ಗೆ ವರದಿ ಮೇಲೆ ನಂಬಿಕೆ ಇದ್ದಿದ್ದರೆ ಅನ್ಯಾಯ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್
ನಾವು ಹಿಂದೂವಾದಿಗಳು. ಯಾವ ಜಾತಿಗೂ ಅನ್ಯಾಯ ಮಾಡಲ್ಲ. ಆದರೆ ಕಾಂಗ್ರೆಸ್ ನವರು ಅಧಿಕಾರಕ್ಕಾಗಿ ಜಾತಿ ಹೆಸರು ಬಳಸುತ್ತಿದ್ದಾರೆ. ಸೋಲಿನ ಭೀತಿಯಿಂದ ಜಾತಿಗಣತಿ ವರದಿ ಬಿಡುಗಡೆ ಮಾಡಿಲ್ಲ. ಈಗ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಜಾತಿಗಣತಿ ಬಗ್ಗೆ ಯಾರೂ ಮಾತನಾಡಬೇಡಿ ಎಂದು ಹೇಳಿದ್ದಾರೆ. ಜಾತಿಗಣತಿ ವರದಿ ಸಿದ್ಧವಾಗದಿರಲು ಸಿದ್ದರಾಮಯ್ಯ ಕಾರಣ. ಸಿದ್ದರಾಮಯ್ಯ ವರದಿಯನ್ನು ಸಾಯಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅದನ್ನು ಹೂತುಹಾಕಿದ್ದಾರೆ ಅಷ್ಟೇ ಎಂದು ಗುಡುಗಿದರು.