ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಶೀಘ್ರವೇ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆ ಆನಂದಪುರಂ ಮುರುಘಾಮಠದಲ್ಲಿ ಜಗದ್ಗುರು ಗುರುಬಸವೇಶ್ವರ ಪ್ರಥಮ ದರ್ಜೆ ಕಾಲೇಜು ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ. ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಶೀಘ್ರವೇ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.