ಬೆಂಗಳೂರು: ಇಂದಿನಿಂದ ಸೆ.23ರವರೆಗೆ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ರಾಜ್ಯ ಸರ್ಕಾರಕ್ಕೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯೇರಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸದಾಶಿವನಗರದ ತಮ್ಮ ನಿವಾಸದಿಂದ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದರೆ ಇನ್ನೊಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರು ಕೂಡ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ಮೂಲಕ ಕೈ ನಾಯಕರು ಬೆಲೆ ಏರಿಕೆ ವಿರುದ್ಧ ಎತ್ತಿನ ಗಾಡಿ ಚಲೋ ನಡೆಸಿದ್ದಾರೆ.
ಔಷಧ-ಫಿಟ್‌ನೆಸ್ ಉತ್ಪನ್ನ ಪೂರೈಕೆ ಬಂದ್ ಮಾಡಿದ ’ಜೊಮ್ಯಾಟೊ’
ಈ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಜನರಿಂದ ಪ್ರತಿದಿನ ಪಿಕ್ ಪಾಕೆಟ್ ಮಾಡುತ್ತಿದೆ. ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ಬೆಲೆ ಏರಿಕೆ ನಡುವೆ ಜನಸಾಮಾನ್ಯರು ಬದುಕು ನಡೆಸುವುದಾದರು ಹೇಗೆ? ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ. ಬೆಲೆ ಏರಿಕೆ ಕಡಿಮೆಯಾಗುವವರೆಗೂ ನಮ್ಮ ಹೋರಾಟ ನಿಲ್ಲಿಸಲ್ಲ. ಸರ್ಕಾರಕ್ಕೆ ಬಿಸಿಮುಟ್ಟಿಸಲೆಂದೇ ಎತ್ತಿನಗಾಡಿಯಲ್ಲಿ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದರು.