alex Certify BIG NEWS: ಯುಪಿಎ ಸರ್ಕಾರದ ಅವಧಿಯಲ್ಲೂ ಧರಣಿ ಮಾಡಬೇಕಿತ್ತು; ಆಗ ಕಾಂಗ್ರೆಸ್ ಪ್ರತಿಭಟನೆಗೆ ಅರ್ಥ ಬರುತ್ತಿತ್ತು; ‘ಕೈ’ ನಾಯಕರ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯುಪಿಎ ಸರ್ಕಾರದ ಅವಧಿಯಲ್ಲೂ ಧರಣಿ ಮಾಡಬೇಕಿತ್ತು; ಆಗ ಕಾಂಗ್ರೆಸ್ ಪ್ರತಿಭಟನೆಗೆ ಅರ್ಥ ಬರುತ್ತಿತ್ತು; ‘ಕೈ’ ನಾಯಕರ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರ ಎತ್ತಿನ ಗಾಡಿ ಚಲೋ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಯುಪಿಎ ಸರ್ಕಾರದ ಅವಧಿಯಲ್ಲಿಯೂ ಧರಣಿ ನಡೆಸಬೇಕಿತ್ತು. ಆಗ ಇವರು ಮಾಡಿದ ಪ್ರತಿಭಟನೆಗೆ ಅರ್ಥ ಬರುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಲೆ ಏರಿಕೆ ಖಂಡಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಇಂದು ಎತ್ತಿನ ಗಾಡಿಗಳಲ್ಲಿ ಅಧಿವೇಶನಕ್ಕೆ ಆಗಮಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರದೇ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿತ್ತು. ಆಗ ಇವರು ಪ್ರತಿಭಟನೆ ಮಾಡಬೇಕಿತ್ತು ಯಾಕೆ ಮಾಡಿಲ್ಲ? ಇದೊಂದು ರಾಜಕೀಯ ಪ್ರೇರಿತ ಪ್ರತಿಭಟನೆ ಎಂದು ಹೇಳಿದರು.

SHOCKING NEWS: ಕೈ ಪ್ರತಿಭಟನೆ ವೇಳೆ ಅವಾಂತರ; ಎತ್ತಿನಗಾಡಿಯಿಂದ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕರು

ಬೆಲೆ ಏರಿಕೆ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಕಾಂಗ್ರೆಸ್ ನವರ ಎಲ್ಲಾ ಪ್ರಶ್ನೆಗಳಿಗೆ ನಾನು ಸದನದಲ್ಲೇ ತಕ್ಕ ಉತ್ತರವನ್ನು ನೀಡುತ್ತೇನೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...