ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯಲಿದೆ. ಹೆಚ್ಚಿನ ಮಳೆಯಾಗುವ ಕಾರಣ ಸೆಪ್ಟಂಬರ್ 15 ರವರೆಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.