alex Certify ಒಂದೆಡೆ ಸರ್ಕಾರದಿಂದಲೇ ದೇಗುಲಗಳ ತೆರವು; ಇನ್ನೊಂದೆಡೆ ಬಿಜೆಪಿಗರಿಂದಲೇ ಪ್ರತಿಭಟನೆ; ರಾಜ್ಯ ಸರ್ಕಾರದ ದ್ವಿಮುಖ ನೀತಿಗೆ ಕುಮಾರಸ್ವಾಮಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೆಡೆ ಸರ್ಕಾರದಿಂದಲೇ ದೇಗುಲಗಳ ತೆರವು; ಇನ್ನೊಂದೆಡೆ ಬಿಜೆಪಿಗರಿಂದಲೇ ಪ್ರತಿಭಟನೆ; ರಾಜ್ಯ ಸರ್ಕಾರದ ದ್ವಿಮುಖ ನೀತಿಗೆ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ದೇವಾಲಯಗಳ ತೆರವಿಗೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ಸರ್ಕಾರದಿಂದಲೇ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಹೀಗಿರುವಾಗ ರಾಜ್ಯದಲ್ಲಿ ಒಂದೆಡೆ ದೇವಾಲಯಗಳನ್ನು ತೆರವು ಮಾಡಿಸುತ್ತಿದ್ದಾರೆ, ಇನ್ನೊಂದೆಡೆ ಬಿಜೆಪಿಯ ಅಂಗಪಕ್ಷಗಳಿದಲೇ ದೇವಾಲಯಗಳ ತೆರವು ವಿರೋಧಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ಜನರನ್ನು ಡೈವರ್ಟ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಹಿಂದೂ ಜಾಗರಣ ಸಮೀತಿ ಎಂಬುದು ಬಿಜೆಪಿ ಅಂಗಪಕ್ಷ. ಅವರೇ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾರ ವಿರುದ್ಧ ಪ್ರತಿಭಟನೆ? ಇಂತಹ ದ್ವಿಮುಖ ನೀತಿ ಅನುಸರಿಸುತ್ತಿರುವುದಾದರೂ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಕೃಷಿಕರಿಗೆ ಖುಷಿ ಸುದ್ದಿ: ಖಾತೆಗೆ 4000 ಬರಬೇಕೆಂದ್ರೆ ಈಗಲೇ ಹೆಸರು ನೋಂದಾಯಿಸಿ

ದೇವಾಲಯಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದರೆ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಬೇಕಿತ್ತು. ದೇವಾಲಯಗಳ ತೆರವು ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಪರ್ಯಾಯ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕಿತ್ತು. ಅದನ್ನು ಬಿಟ್ಟು ಜನರನ್ನು ಗೊಂದಲಕ್ಕೀಡು ಮಾಡಲು ಹೊರಟಿರುವುದು ಸರಿಯಲ್ಲ. ಈಗಲೂ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ ಸಮಸ್ಯೆ ಬಗೆಹರಿಸಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...