ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಕುರಿತಂತೆ ಸುಪ್ರೀಂ ಕೋರ್ಟ್ ಮೀಸಲಾತಿ ನೀಡಲು ಹೊಸ ನೀತಿ ರೂಪಿಸಿಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿ ಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪು ಮರು ಪರಿಶೀಲನೆಗೆ ನಿರಾಕರಿಸಲಾಗಿದೆ. ನ್ಯಾಯಾಲಯದ ಆದೇಶವನ್ನು ಯಾವ ರೀತಿ ಅನುಷ್ಠಾನಗೊಳಿಸಬೇಕು ಎನ್ನುವುದು ಸರ್ಕಾರಗಳಿಗೆ ಬಿಟ್ಟ ವಿಚಾರ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಪರಿಶಿಷ್ಟ ನೌಕರರ ಮೀಸಲಾತಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್. ನಾಗೇಶ್ವರರಾವ್ ನೇತೃತ್ವದ ತ್ರಿಸದಸ್ಯ ಪೀಠ, ಹಿಂದಿನ ತೀರ್ಪಿನ ಮರುಪರಿಶೀಲನೆಗೆ ನಿರಾಕರಿಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದ್ದು, ತೀರ್ಪು ಜಾರಿ ಕುರಿತಂತೆ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಪಟ್ಟಿ ಮಾಡಿ ಎರಡು ವಾರದೊಳಗೆ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ.