ಬೆಂಗಳೂರು: ಫ್ಲಾಟ್ ನೋಂದಣಿ ಶುಲ್ಕ ಕಡಿಮೆ ಮಾಡುವ ವಿಧೇಯಕವನ್ನು ಸದನದಲ್ಲಿ ಮಂಡಿಸಲಾಗಿದೆ. 45 ಲಕ್ಷ ರೂಪಾಯಿವರೆಗಿನ ಫ್ಲಾಟ್ ನೋಂದಣಿ ಶುಲ್ಕವನ್ನು ಶೇಕಡ 3ಕ್ಕೆ ಇಳಿಕೆ ಮಾಡಲಾಗಿದೆ.
ಫ್ಲಾಟ್ ಗಳ ನೋಂದಣಿ ಮುದ್ರಾಂಕ ಶುಲ್ಕ ಕಡಿತಗೊಳಿಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸ್ಟಾಂಪು ತಿದ್ದುಪಡಿ ವಿಧೇಯಕ ಮಂಡಿಸಲಾಗಿದ್ದು, 35 ಲಕ್ಷ ರೂ.ಗಿಂತ 45 ಲಕ್ಷ ರೂ.ವರೆಗಿನ ಅಪಾರ್ಟ್ ಮೆಂಟ್ ಗಳ ಮೊದಲ ನೋಂದಣಿ ಮುದ್ರಾಂಕ ಶುಲ್ಕವನ್ನು ಶೇಕಡ 5 ರಿಂದ ಶೇಕಡ 3 ಕ್ಕೆ ಇಳಿಕೆ ಮಾಡಲಾಗಿದೆ. ಬಜೆಟ್ ನಲ್ಲಿ ನೀಡಿದ್ದ ಭರವಸೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.