ಚೆನ್ನೈ: ಸರ್ಕಾರಿ ಉದ್ಯೋಗದಲ್ಲಿ ಮಹಿಳಾ ಮೀಸಲಾತಿಯನ್ನು ಶೇಕಡ 30 ರಿಂದ 40ಕ್ಕೆ ಏರಿಕೆ ಮಾಡಲು ತಮಿಳುನಾಡು ಸರ್ಕಾರ ಕ್ರಮಕೈಗೊಂಡಿದೆ.
ಮಾನವ ಸಂಪನ್ಮೂಲ ನಿರ್ವಹಣೆ ಖಾತೆ ಸಚಿವ ಪಳನಿವೇಲ್ ತ್ಯಾಗರಾಜನ್ ಅವರು ವಿಧಾನಸಭೆಯಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮಹಿಳಾ ಮೀಸಲಾತಿ ಪ್ರಮಾಣವನ್ನು ಶೇಕಡ 40ರಷ್ಟು ಏರಿಸುವ ಸಂಬಂಧಿತ ಕಾಯಿದೆಗೆ ಅಗತ್ಯ ತಿದ್ದುಪಡಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ತಮಿಳುನಾಡು ಲೋಕಸೇವಾ ಆಯೋಗ, ಶಿಕ್ಷಕರ ನೇಮಕಾತಿ ಮಂಡಳಿ ಮೂಲಕ ಖಾಲಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಸಮಾನಾಂತರ ಮೀಸಲಾತಿ ಸೂತ್ರವನ್ನು ಅನುಸರಿಸುತ್ತದೆ. ಮಹಿಳೆಯರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.