ಬೆಂಗಳೂರು: ಅಶೋಕನಗರದ ಫುಟ್ಬಾಲ್ ಗ್ರೌಂಡ್ ನಲ್ಲಿ ನಡೆದಿದ್ದ ರೌಡಿ ಶೀಟರ್ ಅರವಿಂದನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸ್ಟಾಲಿನ್, ವಿಜಯ್, ಅರುಣ್ ಹಾಗೂ ಜಾಕ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧಕಾರ್ಯ ಮುಂದುವರೆದಿದೆ.
ರೌಡಿ ಶೀಟರ್ ಅರವಿಂದ ಪದೇ ಪದೇ ನಮ್ಮನ್ನು ಅಟ್ಯಾಕ್ ಮಾಡುತ್ತಿದ್ದ ಅದೇ ಕಾರಣಕ್ಕೆ ಆತನನ್ನು ಹತ್ಯೆ ಮಾಡಿರುವುದಾಗಿ ಆರೋಪಿ ಸ್ಟಾಲಿನ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.