ಚಾಮರಾಜನಗರ: ಹುಟ್ಟುಹಬ್ಬದ ದಿನವೇ ಮೂರು ವರ್ಷದ ಮಗು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೆಂಗಾಕಿ ಗ್ರಾಮದಲ್ಲಿ ನಡೆದಿದೆ.
ನಿವೇದಿತಾ ಮೃತಪಟ್ಟ ಮಗು ಎಂದು ಹೇಳಲಾಗಿದೆ. ವಿದ್ಯುತ್ ಪ್ರವಹಿಸಿ ನಿವೇದಿತಾ ಮೃತಪಟ್ಟಿದ್ದು, ಮುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ನಿವೇದಿತಾ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮನೆಯವರು ಹೊಸ ಬಟ್ಟೆ ತೊಡಿಸಿ ಕೇಕ್ ಕತ್ತರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ, ಇದೇ ವೇಳೆ ದುರಂತ ನಡೆದು ಹೋಗಿದೆ.
ನಿವೇದಿತಾ ಕುಟುಂಬದವರು ತೋಟದ ಮನೆಯಲ್ಲಿ ವಾಸವಾಗಿದ್ದು, ಆಟವಾಡುತ್ತಿದ್ದ ಸಂದರ್ಭದಲ್ಲಿ ನಿವೇದಿತಾ ಪಂಪ್ ಸೆಟ್ ಮುಟ್ಟಿದ್ದು, ಈ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.