ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1108 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 809 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 18 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ 16,174 ಸಕ್ರಿಯ ಪ್ರಕರಣಗಳಿವೆ. ಇವತ್ತು 1,66,006 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ಶೇಕಡ 0.66 ರಷ್ಟು ಇದೆ. ರಾಜಧಾನಿ ಬೆಂಗಳೂರಿನಲ್ಲಿ 308 ಜನರಿಗೆ ಸೋಂಕು ತಗುಲಿದ್ದು, 203 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 7428 ಸಕ್ರಿಯ ಪ್ರಕರಣಗಳಿವೆ.