ಬೆಂಗಳೂರಿನಲ್ಲಿ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜಯನಗರ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ.
ಮಿಲಿಟರಿ ಶಾಲೆ ವಿದ್ಯಾರ್ಥಿ ರಾಹುಲ್ ಭಂಡಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗುಂಡು ಹಾರಿಸಿಕೊಂಡು ರಾಹುಲ್ ಮೃತಪಟ್ಟಿದ್ದು, ಇದು ಆತ್ಮಹತ್ಯೆಯೋ? ಕೊಲೆಯೋ ಎಂಬ ಶಂಕೆ ವ್ಯಕ್ತವಾಗಿದ್ದು, ಆತನ ಜೇಬಿನಲ್ಲಿ ಮೊಬೈಲ್, ಗನ್ ಪತ್ತೆಯಾಗಿದೆ.
ಸದಾಶಿವ ನಗರ ಠಾಣೆ ಪೊಲೀಸರು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ರಾಹುಲ್ ಭಂಡಾರಿ ದ್ವಿತೀಯ ಪಿಯುಸಿ ಓದುತ್ತಿದ್ದು, ಪ್ರತಿದಿನ ಬೆಳಗಿನ ಜಾವ 3 ಗಂಟೆಗೆ ಎದ್ದು ಓದಿಕೊಳ್ಳುತ್ತಿದ್ದ. ಇವತ್ತು ಮನೆಯಿಂದ ಹೊರಗೆ ಬಂದು ಗುಂಡು ಹಾರಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ರಾಹುಲ್ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.