ಬೆಂಗಳೂರು: ಮಿಲಿಟರಿ ಶಾಲೆ ದ್ವಿತಿಯ ಪಿಯು ವಿದ್ಯಾರ್ಥಿ ರಾಹುಲ್ ಭಂಡಾರಿ ಆತ್ಮಹತ್ಯೆ ಪ್ರಕರಣ ಹಲವು ಅನುಮಾನಕ್ಕೆ ಕಾರಣವಾಗಿದೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿ ರಾಹುಲ್ ತನ್ನ ತಂದೆಯ ಬಳಿ 500 ರೂಪಾಯಿ ಕೇಳಿದ್ದ ಎಂದು ತಿಳಿದುಬಂದಿದೆ.
ವಿದ್ಯಾರ್ಥಿ ರಾಹುಲ್ ನಿನ್ನೆ ರಾತ್ರಿ ತಂದೆ ಭಗತ್ ಬಳಿ 500 ರೂಪಾಯಿ ನೀಡುವಂತೆ ಕೇಳಿದ್ದ. ಆದರೆ 500 ರೂಪಾಯಿ ಯಾಕೆ ಎಂದು ತಂದೆ ಪ್ರಶ್ನಿಸಿದ್ದಾರೆ. ಇದೇ ವಿಚಾರವಾಗಿ ರಾಹುಲ್ ಬೇಸರ ಮಾಡಿಕೊಂಡಿದ್ದ ಎನ್ನಲಾಗಿದೆ. ರಾತ್ರಿ ಮನೆಯಲ್ಲಿಯೇ ಮಲಗಿದ್ದ ರಾಹುಲ್ ಭಂಡಾರಿ ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಿಂದ ಹೊರ ಹೋಗಿದ್ದಾನೆ.
ಚಲಿಸುತ್ತಿರುವ ರೈಲಿನಲ್ಲಿ ಯುವಕನ ಹುಚ್ಚಾಟ: ವಿಡಿಯೋ ನೋಡಿ ನೆಟ್ಟಿಗರಿಗೆ ಶಾಕ್
ಬೆಳಗಿನ ಜಾವ 3-44ಕ್ಕೆ ಬಿನ್ನಿ ಮಿಲ್ ರಸ್ತೆಯಲ್ಲಿ ರಾಹುಲ್ ಮೊಬೈಲ್ ನಲ್ಲಿ ಚಾಟ್ ಮಾಡುತ್ತಾ ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ತಂದೆ-ತಾಯಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೇ ರಾಹುಲ್ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ರಾಹುಲ್ ಪಿಸ್ತೂಲಿನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಸಂಜಯ ನಗರ ಬಸ್ಟಾಪ್ ನಲ್ಲಿ ಮೃತ ದೇಹ ಪತ್ತೆಯಾಗಿದ್ದು, ಘಟನಾ ಸ್ಥಳದಲ್ಲಿ 5 ಜೀವಂತ ಗುಂಡುಗಳು ಪತ್ತೆಯಾಗಿವೆ. ವಿದ್ಯಾರ್ಥಿ ರಾಹುಲ್ ನದ್ದು ಆತ್ಮಹತ್ಯೆಯೇ ಅಥವಾ ಯಾರಾದರೂ ಶೂಟ್ ಮಾಡಿ ಕೊಲೆ ಮಾಡಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದ್ದು, ಸದಾಶಿವನಗರ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.