ಬೆಂಗಳೂರು: ವಿಧಾನಸಭೆಯಲ್ಲಿ ಮಹತ್ವದ ವಿಧೇಯಕವನ್ನು ಮಂಡನೆ ಮಾಡಲಾಗಿದ್ದು, ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದ್ದಾರೆ.
ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ನಿಷೇಧಿಸುವ ನಿಟ್ಟಿನಲ್ಲಿ ವಿಧೇಯಕದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಆನ್ ಲೈನ್ ಜೂಜಾಟ, ಬೆಟ್ಟಿಂಗ್ ಮಾಡುವವರಿಗೆ ಒಂದರಿಂದ ಮೂರು ವರ್ಷಗಳವರೆಗೆ ಜೈಲುಶಿಕ್ಷೆ 1 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಜನ್ಮದಿನ: 71 ಅಡಿ ಉದ್ದದ ಸಿರಿಂಜ್ ಆಕಾರದ ಕೇಕ್ ಕತ್ತರಿಸಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಈ ವಿಧೇಯಕ ಲಾಟರಿ, ಕುದುರೆ ರೇಸ್ ಬಾಜಿಗೆ ಅನ್ವಯವಾಗುವುದಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಆನ್ ಲೈನ್ ಮೂಲಕ ನಡೆಯುವ ಬೆಟ್ಟಿಂಗ್, ಜೂಜಾಟಗಳಿಗೆ ಅನ್ವಯವಾಗಲಿದ್ದು, ಅಂತವರಿಗೆ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು. ಜೂಜಾಟಕ್ಕೆ ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ 6 ತಿಂಗಳು ಜೈಲು, 10 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.