ಮೈಸೂರು: ದೇವಾಲಯಗಳನ್ನು ತೆರವು ಮಾಡಿರುವುದು ಸರಿಯಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಇಂತಹ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ತೆರಳಿ ಸುತ್ತೂರು ಶ್ರೀಗಳನ್ನು ಭೇಟಿಯಾದ ಬಳಿಕ ಮಾತನಾಡಿದ ಯಡಿಯೂರಪ್ಪ, ದೇವಾಲಯಗಳನ್ನು ತೆರವು ಮಾಡುವ ಮುನ್ನ ಚರ್ಚೆ ನಡೆಸಬೇಕಿತ್ತು. ಸಾರ್ವಜನಿಕರ ಅಭಿಪ್ರಾಯ ಕೇಳಬೇಕಿತ್ತು. ಏಕಾಏಕಿ ದೇಗುಲಗಳ ನೆಲಸಮ ಮಾಡಿದ್ದು ಸರಿಯಲ್ಲ ಎಂದು ಹೇಳಿದರು.
ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಸಮುದ್ರ ಚಿಪ್ಪುಗಳಲ್ಲಿ ನಿರ್ಮಾಣವಾಯ್ತು ಮರಳುಶಿಲ್ಪ
ಇದೇ ವೇಳೆ ಉಪಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ವಿಜಯೇಂದ್ರ ಸಧ್ಯಕ್ಕೆ ಯಾವುದೇ ಉಪಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಪ್ರಸ್ತುತ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಹೇಳಿದರು.