ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಅಡಿಪಾಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ರೋಲರ್ ಕಾಂಪ್ಯಾಕ್ಟ್ ಕಾಂಕ್ರೀಟ್ನ ಕೊನೆಯ ಹಾಗೂ 48ನೇ ಪದರವನ್ನು ತುಂಬಲಾಗಿದೆ ಎಂದು ರಾಮಮಂದಿರ ಟ್ರಸ್ಟ್ ಮಾಹಿತಿ ನೀಡಿದೆ.
ಅಡಿಪಾಯ ನಿರ್ಮಾಣ ಕಾರ್ಯದ ಮೊದಲ ಹಂತ ಪೂರ್ಣಗೊಂಡಿದೆ. ಕಲ್ಲುಗಳಿಂದ ಕೂಡಿದ ಇನ್ನೊಂದು ಪದರವನ್ನು ನಿರ್ಮಿಸುತ್ತೇವೆ. ಕರ್ನಾಟಕದ ಗ್ರಾನೈಟ್ ಹಾಗೂ ಮಿರ್ಜಾಪುರದ ಮರಳುಗಲ್ಲು ಕಾಂಕ್ರೀಟ್ ಬೇಸ್ ಮೇಲೆ ಇರಲಿದೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಹೇಳಿದ್ರು.
ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಆಗಸ್ಟ್ 5ರಂದು ರಾಮಮಂದಿರಕ್ಕೆ ಅಡಿಗಲ್ಲನ್ನು ಹಾಕಿದ್ದರು. ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು 2023ರ ಡಿಸೆಂಬರ್ ತಿಂಗಳಲ್ಲಿ ಭಕ್ತರ ದರ್ಶನಕ್ಕೆ ದೇಗುಲವನ್ನು ಮುಕ್ತಗೊಳಿಸುವ ಗುರಿಯನ್ನು ಹೊಂದಲಾಗಿದೆ. 110 ಎಕರೆ ಜಾಗದಲ್ಲಿ 900 ರಿಂದ 1000 ಕೋಟಿ ರೂಪಾಯಿ ವೆಚ್ಚದಲ್ಲಿ ಈ ದೇವಾಲಯ ಸಂಕೀರ್ಣ ತಲೆಎತ್ತಲಿದೆ.