ದಾವಣಗೆರೆ: ಪಕ್ಷ ಸಂಘಟನೆ ನಿಟ್ಟಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೈಗೊಳ್ಳುವ ರಾಜ್ಯ ಪ್ರವಾಸ ಆರಂಭಕ್ಕೆ ಅನುಮತಿ ಅಗತ್ಯವಿಲ್ಲ. ಯಡಿಯೂರಪ್ಪ ಹಿರಿಯ ನಾಯಕರು, ಅವರು ರಾಜ್ಯ ಪ್ರವಾಸ ಮಾಡಬಹುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಪಕ್ಷದ ಕಾರ್ಯಕಾರಿಯಲ್ಲಿ ಮಾತನಾಡಿದ ಅರುಣ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ. ಸಮಾಜದ ಎಲ್ಲಾ ಜನರನ್ನು ನಿಭಾಯಿಸುತ್ತಿದ್ದಾರೆ. ಜನರಿಗೆ ಅನುಕೂಲವಾಗುವ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ನೂತನ ಸಿಎಂ ಕಾರ್ಯವೈಖರಿ ಶ್ಲಾಘಿಸಿದರು.
ತಂದೆಯಿಂದ ಹಣ ಪೀಕಲು ಮಾಡಬಾರದ ಕೆಲಸ ಮಾಡಿದ ಮಗ..!
ಎರಡು ದಿನಗಳ ಕಾಲ ದಾವಣಗೆರೆಯಲ್ಲಿ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷದ ವಿಚಾರಧಾರೆಗಳು, ಕೈಗೊಳ್ಳಬೇಕಾದ ಕೆಲಸ ಮೊದಲಾದವುಗಳ ಬಗ್ಗೆ ಸಮಗ್ರ ಚರ್ಚೆ ನಡೆಯಲಿದೆ. ಮುಂಬರುವ ವಿಧಾನಸಭಾ ಚುನಾವಣೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಈಗಗಲೇ ಸ್ಪಷ್ಟಪಡಿಸಿದ್ದೇನೆ. ಚುನಾವಣೆ ದೃಷ್ಟಿಯಿಂದ ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಎರಡು ದಿನಗಳ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.