ಬೆಂಗಳೂರು: ಕೋಲಾರ ಜೆಡಿಎಸ್ ಶಾಸಕ ಕೆ. ಶ್ರೀನಿವಾಸಗೌಡ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ.
ಕೋಲಾರಕ್ಕೆ ಕೆಸಿ ವ್ಯಾಲಿ ನೀರು ತರುವಲ್ಲಿ ಕಾಂಗ್ರೆಸ್ ನಾಯಕರಾದ ರಮೇಶ್ ಕುಮಾರ್ ಮತ್ತು ಕೃಷ್ಣ ಭೈರೇಗೌಡರ ಪ್ರಯತ್ನವಿದೆ. ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಆದ್ಯತೆ ನೀಡುವುದಾಗಿ ಅವರು ತಿಳಿಸಿದ್ದಾರೆ. ಕೋಲಾರ ಜೆಡಿಎಸ್ ಪಕ್ಷದ ಮುಖಂಡ ಹಾಗೂ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜೆಡಿಎಸ್ ಪಕ್ಷದಿಂದ ಉಚ್ಚಾಟಿಸುವ ಮೊದಲೇ ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಶ್ರೀನಿವಾಸಗೌಡ ಹೇಳಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಕುರಿತಾಗಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.