ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಮಾಜಿ ಕೋಚ್ ಅನಿಲ್ ಕುಂಬ್ಳೆ ಹಾಗೂ ಹಿರಿಯ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರಿಗೆ ಅವಕಾಶ ನೀಡುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ.
ಟಿ20 ವಿಶ್ವಕಪ್ ಬಳಿಕ ರವಿಶಾಸ್ತ್ರಿ ಮುಖ್ಯ ಕೋಚ್ ಹುದ್ದೆ ಅವಧಿ ಮುಕ್ತಾಯವಾಗಿದೆ. ಅವರು ಅವಧಿ ವಿಸ್ತರಣೆಗೆ ಆಸಕ್ತಿ ತೋರಿಲ್ಲ ಎನ್ನಲಾಗಿದ್ದು, ಹೀಗಾಗಿ ಬಿಸಿಸಿಐ ಅಧಿಕಾರಿಗಳು ಭಾರತ ತಂಡದ ಮುಖ್ಯ ಕೋಚ್ ಹುದ್ದೆ ವಹಿಸಿಕೊಳ್ಳುವಂತೆ ಅನಿಲ್ ಕುಂಬ್ಳೆ ಅವರಿಗೆ ಆಹ್ವಾನ ನೀಡಿದ್ದಾರೆ. ಹಿರಿಯ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರಿಗೂ ಮುಖ್ಯ ಕೋಚ್ ಹುದ್ದೆ ವಹಿಸಿಕೊಳ್ಳಲು ಚರ್ಚೆ ನಡೆಸಿದ್ದಾರೆ.
2016 ರಲ್ಲಿ ಅನಿಲ್ ಕುಂಬ್ಳೆ ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೇರಿದ್ದರು. ಆದರೆ, ನಾಯಕ ವಿರಾಟ್ ಕೊಹ್ಲಿ ಭಿನ್ನಾಭಿಪ್ರಾಯದಿಂದ ರಾಜೀನಾಮೆ ನೀಡಿದ್ದರು. ಈಗ ರವಿಶಾಸ್ತ್ರಿ ನಿರ್ಗಮನದ ನಂತರ ಅನಿಲ್ ಕುಂಬ್ಳೆ ಅಥವಾ ಲಕ್ಷ್ಮಣ್ ಅವರಲ್ಲಿ ಒಬ್ಬರು ಮುಖ್ಯ ಕೋಚ್ ಹುದ್ದೆಗೇರಲಿದ್ದಾರೆ ಎನ್ನಲಾಗಿದೆ.