ಬೆಂಗಳೂರು: ಮೂರು ತಿಂಗಳಲ್ಲಿ 2.50 ಕೋಟಿ ಕುಟುಂಬದವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 3 ತಿಂಗಳೊಳಗೆ ರಾಜ್ಯದ 2.50 ಕೋಟಿ ಕುಟುಂಬದವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಐಸಿಎಂಆರ್ ಮಾರ್ಗಸೂಚಿಯೊಂದಿಗೆ ಒಪ್ಪಿಗೆ ನೀಡಿದ ಕೂಡಲೇ 12ರಿಂದ 17 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಸರ್ಕಾರ ಸಿದ್ಧತೆ ಕೈಗೊಂಡಿದೆ. ಮಕ್ಕಳಿಗೆ ಲಸಿಕೆ ಕ್ಲಿನಿಕಲ್ ಪ್ರಯೋಗ ಬಹುತೇಕ ಪೂರ್ಣಗೊಂಡಿದೆ. ಮೂಗಿನ ಮೂಲಕ ಹಾಕುವ ಲಸಿಕೆ ಸಂಶೋಧನೆ ಕೂಡ ನಡೆದಿದ್ದು, ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.