ದಾವಣಗೆರೆ: ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭರತ್ ಕಾಲೋನಿಯ ಕೃಷ್ಣನಾಯ್ಕ, ಸುಮಾ ಹಾಗೂ ದ್ರುವ ಮೃತಪಟ್ಟವರು ಎಂದು ಹೇಳಲಾಗಿದೆ.
ಪತ್ನಿ, ಮಗನಿಗೆ ವಿಷ ಕುಡಿಸಿ ಕೃಷ್ಣನಾಯ್ಕ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆರ್.ಎಂ.ಸಿ. ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.