ಮಂಗಳೂರು: ಹಾಡಹಗಲೇ ಸರ್ಕಾರಿ ಕಚೇರಿಯಲ್ಲಿ ದುಷ್ಕರ್ಮಿಯೊಬ್ಬ ಅಟ್ಟಹಾಸ ಮೆರೆದಿದ್ದು, ಮೂವರು ಮಹಿಳೆಯರ ಮೇಲೆ ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ಮಂಗಳೂರಿನ ಕರಂಗಲಪಾಡಿ ಕಚೇರಿಯಲ್ಲಿ ನಡೆದಿದೆ.
ಸರ್ಕಾರಿ ಕಚೇರಿಗೆ ನುಗ್ಗಿದ ದುಷ್ಕರ್ಮಿ ತಲ್ವಾರ್ ನಿಂದ ಮೂವರು ಮಹಿಳೆಯರ ಮೇಲೆ ದಾಳಿ ನಡೆಸಿದ್ದಾನೆ. ನಿರ್ಮಲಾ, ರೀನಾ ರಾಯ್, ಗುಣವತಿ ಎಂಬ ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡಿರುವ ನಿರ್ಮಲಾ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಬರ್ಕೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.