ಬೆಂಗಳೂರು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿಯಲ್ಲಿ ಹುಚ್ಚಗಣಿ ಮಹದೇವಮ್ಮ ದೇವಾಲಯ ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಕಡತ ಮಂಡಿಸಿ ಮುಂದಿನ ಕ್ರಮ ಕೈಗೊಳ್ಳಲು ಸಿಎಂ ಬಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಕಡತ ಮಂಡಿಸಿ ಮುಂದಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ದೇವಾಲಯ ಮರುನಿರ್ಮಾಣ ಮಾಡಬೇಕೆಂದು ಮುಖ್ಯಮಂತ್ರಿಗೆ ನಂಜನಗೂಡು ಶಾಸಕ ಹರ್ಷವರ್ಧನ ಮನವಿ ಮಾಡಿದ್ದರು. 20 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿದ್ದು, ಅವರ ಮನವಿ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕ್ರಮ ಕೈಗೊಂಡಿದ್ದಾರೆ.
ದೇವಾಲಯ ತೆರವು ಮಾಡಿದ್ದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ದೇಗುಲಗಳ ತೆರವಿಗೆ ಬ್ರೇಕ್ ಹಾಕುವ ಬಗ್ಗೆ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಹೇಳಿದ್ದರು.