ಬೆಂಗಳೂರು: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಇಂದು ಮತ್ತು ನಾಳೆ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಯಾದಗಿರಿ, ಬೀದರ್, ಕಲ್ಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.