ಬೆಂಗಳೂರು: ಶಿವಮೊಗ್ಗ ತಾಲೂಕಿನ ಕಡೇಕಲ್ ಗ್ರಾಮದಲ್ಲಿ ಆಶ್ರಯ ಯೋಜನೆಯಡಿ ಬಡವರಿಗೆ ನೀಡಲಾದ ಸೈಟ್ ನಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ.
ಬಡವರಿಗೆ ಹಂಚಿಕೆಯಾದ ಆಶ್ರಯ ನಿವೇಶನದಲ್ಲಿ ಎಂಎಸ್ಐಎಲ್ ಮದ್ಯದಂಗಡಿ ಆರಂಭಿಸಿರುವ ಕುರಿತು ಸ್ಥಳೀಯ ಗ್ರಾಮಸ್ಥರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ ರಾಜ್ಯ ಅಬಕಾರಿ ಇಲಾಖೆ ಕಾರ್ಯದರ್ಶಿ, ಆಯುಕ್ತರು ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಅಬಕಾರಿ ಉಪ ಆಯುಕ್ತರು ಎಂಎಸ್ಐಎಲ್ ಜಾರಿಗೊಳಿಸಿದೆ.
ಆಶ್ರಯ ಯೋಜನೆಯಡಿ ಬಡವರಿಗೆ ನೀಡಿದ ನಿವೇಶನದಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆದಿದ್ದು, ನಿಯಮಗಳ ಉಲ್ಲಂಘನೆಯಾಗಿದೆ. ಪರವಾನಗಿ ರದ್ದು ಮಾಡಿ ಅಂಗಡಿ ತೆರವುಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲ ಆರ್. ವೆಂಕಟೇಶ ಪ್ರಸಾದ್ ಮನವಿ ಮಾಡಿದ್ದಾರೆ.