ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 5689 ಹುದ್ದೆಗಳನ್ನು ಹಂತಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, ತಹಶೀಲ್ದಾರರು ಗ್ರೇಡ್ 1 -27,
ಗ್ರೇಡ್ 2 -135, ಶಿರಸ್ತೆದಾರ್ ಮತ್ತು ಉಪ ತಹಶೀಲ್ದಾರ್ 160, ಗ್ರಾಮಲೆಕ್ಕಿಗರು 1792 ಹುದ್ದೆ ಸೇರಿದಂತೆ 5689 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು.
ಭೂ ಮಾಪನ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ 2540 ಹುದ್ದೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಯಲ್ಲಿ 694 ಹುದ್ದೆ ಖಾಲಿ ಇದ್ದು ಇವುಗಳಿಗೆ ನೇಮಕಾತಿ ನಡೆಯಲಿದೆ. ಕೊರೋನಾ ಕಾರಣದಿಂದ ಎಲ್ಲ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ತಡೆ ನೀಡಲಾಗಿತ್ತು.
ಈಗ ಸರ್ಕಾರದಿಂದ ಸೂಚನೆ ನೀಡಲಾಗಿದ್ದು, ಆರ್ಥಿಕ ಇಲಾಖೆಯ ಸಮ್ಮತಿಯೊಂದಿಗೆ ಹಂತಹಂತವಾಗಿ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.