alex Certify ಅಪಾರ್ಟ್ಮೆಂಟ್ ನ 5ನೇ ಮಹಡಿಯಿಂದ ಜಿಗಿದು 52 ವರ್ಷದ ಮಹಿಳೆ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಾರ್ಟ್ಮೆಂಟ್ ನ 5ನೇ ಮಹಡಿಯಿಂದ ಜಿಗಿದು 52 ವರ್ಷದ ಮಹಿಳೆ ಆತ್ಮಹತ್ಯೆಗೆ ಶರಣು

ನವದೆಹಲಿ: 52 ವರ್ಷದ ಮಹಿಳೆಯೊಬ್ಬರು ಮಂಗಳವಾರ ದೆಹಲಿಯ ಅಪಾರ್ಟ್ಮೆಂಟ್ ನ ಐದನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಪೊಲೀಸರ ಪ್ರಕಾರ, ಮುಖರ್ಜಿ ನಗರದ ನಿರಂಕಾರಿ ಕಾಲೋನಿಯ ನಿವಾಸಿಯಾದ ನೇಹಾ ವರ್ಮಾ ತನ್ನ ಪತಿ ಧರಂ ವರ್ಮಾ ಫ್ಲಾಟ್ ಗೆ ಎಂಟ್ರಿ ಕೊಡುತ್ತಿದ್ದಂತೆ ಟೆರೇಸ್‌ನಿಂದ ಜಿಗಿದಿದ್ದಾಳೆ. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಆಕೆ ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ.

ನೇಹಾ ಮತ್ತು ಆಕೆಯ ಪತಿ ಇಬ್ಬರೇ ಫ್ಲಾಟ್ ನಲ್ಲಿ ವಾಸಿಸುತ್ತಿದ್ದರು. ಈ ದಂಪತಿಗೆ ಒಬ್ಬ ಪುತ್ರ ಮತ್ತು ಪುತ್ರಿ ಇದ್ದು ಅವರು ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ. ದಂಪತಿಗಳು ಬೇರೆಯಾಗಲು ಬಯಸಿದ್ದರು ಎನ್ನಲಾಗಿದೆ. ಪೊಲೀಸರ ಪ್ರಕಾರ, ನೇಹಾ ಜಿಗಿಯುವ ಮೊದಲು ಪತಿಗೆ ಐ ಲವ್ ಯು ಸಂದೇಶ ಕಳುಹಿಸಿದ್ದಾಳೆ ಎನ್ನಲಾಗಿದೆ. ಈ ಘಟನೆ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...