ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮುಂದುವರೆಸಿದ್ದು, ಇಂದು ಟಾಂಗಾ ಜಾಥಾ ನಡೆಸುವ ಮೂಲಕ ಅಧಿವೇಶನಕ್ಕೆ ತೆರಳಿದ್ದಾರೆ.
ವಿಧಾನಮಂಡಲ ಅಧಿವೇಶನ ಆರಂಭವಾದ ದಿನದಂದು ಎತ್ತಿನ ಗಾಡಿ ಮೂಲಕ ವಿಧಾನಸೌಧಕ್ಕೆ ಎಂಟ್ರಿ ಕೊಡುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಸಮರ ಸಾರಿದ್ದ ಕಾಂಗ್ರೆಸ್ ನಾಯಕರು ನಂತರ ಸೈಕಲ್ ಜಾಥಾ ಮೂಲಕ ಅಧಿವೇಶಕ್ಕೆ ತೆರಳಿ ಸರ್ಕಾರದ ಗಮನ ಸೆಳೆದರು. ಆದಾಗ್ಯೂ ಸರ್ಕಾರ ಎಚ್ಚೆತ್ತು ಕೊಂಡಿಲ್ಲ, ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಅಧಿವೇಶನದ ಕೊನೇ ದಿನವಾದ ಇಂದು ಕಾಂಗ್ರೆಸ್ ನಾಯಕರು ಟಾಂಗಾ ಏರಿ ಅಧಿವೇಶನಕ್ಕೆ ಆಗಮಿಸುವ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ.
ಕಣ್ಣಾಲಿಗಳು ತುಂಬಿ ಬರುತ್ತೆ ಮೊದಲ ಬಾರಿಗೆ ತನ್ನ ಮಗುವನ್ನು ಹಿಡಿದುಕೊಂಡ ತಂದೆ ಸಂಭ್ರಮ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದವರೆಗೂ ಕುದುರೆ ಟಾಂಗಾ ಏರಿ ಅಧಿವೇಶನಕ್ಕೆ ಆಗಮಿಸಿದ್ದಾರೆ. ಶರವೇಗದಲ್ಲಿ ಏರುತ್ತಿರುವ ತೈಲ ಬೆಲೆ ಕಡಿಮೆ ಮಾಡುವಂತೆ ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಘೋಷಣೆಗಳನ್ನು ಕೂಗಿದ್ದಾರೆ.