ಗ್ರಾಮ ಪಂಚಾಯತಿ ಮಟ್ಟದಿಂದಲೇ ಎಲ್ಲಾ ನಾಗರಿಕ ಸೇವೆಗಳು ಜನರಿಗೆ ಆನ್ಲೈನ್ನಲ್ಲಿ ಸಿಗುವಂತೆ ಆಗಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕರ್ನಾಟಕದ ಐದು ಜಿಲ್ಲೆಯಗಳಲ್ಲಿ ಗ್ರಾಮ ಸೇವಾ ಯೋಜನೆ ಆರಂಭಿಸಲು ನಿರ್ಧರಿಸಿದೆ.
ಐದು ಜಿಲ್ಲೆಗಳಲ್ಲಿ ಈ ಯೋಜನೆಯು ಪ್ರಾಯೋಗಿಕ ಹಂತವಾಗಿ ಆರಂಭಗೊಳ್ಳಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಎಲ್ಲಾ ನಾಗರಿಕ ಸೇವೆಗಳು ಜನರಿಗೆ ಸಿಗಬೇಕು ಎಂಬ ನಿಟ್ಟಿನಲ್ಲಿ ಈ ಯೋಜನೆ ಆರಂಭಕ್ಕೆ ಮುಂದಾಗಲಾಗಿದೆ. ಕಚೇರಿಗಳ ಮುಂದೆ ಗಂಟೆಗಟ್ಟಲೇ ಸಾಲು ನಿಲ್ಲೋದ್ರ ಬದಲು ಜನರ ಮನೆ ಬಾಗಿಲಿಗೆ ಆನ್ಲೈನ್ ಮೂಲಕ ಯೋಜನೆಗಳು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ.
ರಾಜ್ಯ ಸರ್ಕಾರದ ಎಲ್ಲಾ ಸೇವೆಗಳು ಗ್ರಾಮ ಪಂಚಾಯ್ತಿ ಮೂಲಕ ಜನರ ಮನೆ ಬಾಗಿಲಿಗೆ ಸಿಗಲಿ ಎಂಬ ಕಾರಣಕ್ಕೆ ಗ್ರಾಮ ಸೇವಾ ಯೋಜನೆ ಜಾರಿಗೆ ಬರಲಿದೆ. ಮುಂದಿನ ವರ್ಷ ಜನವರಿ 26ರಂದು ಈ ಯೋಜನೆಗೆ ಅಧಿಕೃತ ಚಾಲನೆ ದೊರಕಲಿದೆ. ಪ್ರಾಥಮಿಕ ಹಂತದಲ್ಲಿ ಐದು ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಲ್ಲಿರಲಿದೆ. ಯೋಜನೆಯ ಯಶಸ್ಸನ್ನು ಆಧರಿಸಿ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಯಲ್ಲಿಯೂ ಈ ಯೋಜನೆ ಆರಂಭಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.