alex Certify BIG NEWS: ಸ್ಪೀಕರ್ ಕಾಗೇರಿ ರಾಜ್ಯ ಸರ್ಕಾರದ ಕೈಗೊಂಬೆ; RSS ಸೂಚನೆಯಂತೆ ಸಿಎಂ ಬೊಮ್ಮಾಯಿ ಕೆಲಸ; ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಪೀಕರ್ ಕಾಗೇರಿ ರಾಜ್ಯ ಸರ್ಕಾರದ ಕೈಗೊಂಬೆ; RSS ಸೂಚನೆಯಂತೆ ಸಿಎಂ ಬೊಮ್ಮಾಯಿ ಕೆಲಸ; ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ವಿಧಾನಸಭೆ ಕಲಾಪವನ್ನು ಸ್ಪೀಕರ್ ಕಾಗೇರಿ ಮುಂದೂಡಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶವನ್ನೇ ನೀಡುತ್ತಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸದನದಲ್ಲಿ ಚರ್ಚೆ ಮಾಡಲು ಸಾಕಷ್ಟು ವಿಷಯಗಳಿವೆ. ಆದರೆ ಯಾವುದಕ್ಕೂ ಅವಕಾಶ ನೀಡದೇ ಕಲಾಪವನ್ನು ಅನಿರ್ದಿಷ್ಟಾವಧಿಗೆ ಸ್ಪೀಕರ್ ಕಾಗೇರಿ ಮುಂದೂಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಜನರ ಸಮಸ್ಯೆಗಳನ್ನು ಆಲಿಸುವುದು, ಸಂಕಷ್ಟಗಳಿಗೆ ಪರಿಹಾರ ನೀಡುವುದು ಬೇಕಿಲ್ಲ ಇಂತಹ ಕೆಟ್ಟ ಸರ್ಕಾರವನ್ನು ನಾನು ಇದುವರೆಗೂ ನೋಡಿರಲಿಲ್ಲ ಅದಕ್ಕಾಗಿಯೇ ಇಂದು ಸದನದಲ್ಲಿ ಪ್ರತಿಭಟನೆಗಳನ್ನು ನಡೆಸಿದ್ದೇವೆ ಎಂದರು.

BIG NEWS: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಶಾಸಕರಿಗೆ ಶಿಸ್ತಿನ ಪಾಠ ಮಾಡಿದ ಲೋಕಸಭಾ ಸ್ಪೀಕರ್

ಸಿಎಂ ಬೊಮ್ಮಾಯಿ ಅವರನ್ನು ಏನೋ ಅಂದುಕೊಂಡಿದ್ದೆ. ಆದರೆ ಅವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ, ಸಂವಿಧಾನದ ಮೇಲೂ ನಂಬಿಕೆಯಿಲ್ಲ. ಆರ್ ಎಸ್ ಎಸ್ ಕೈಗೊಂಬೆಗಳಾಗಿ ಬಿಜೆಪಿಯವರು ಕೆಲಸ ಮಾಡುತ್ತಿದ್ದಾರೆ. ಇದೊಂದು ಜನವಿರೋಧಿ, ಪ್ರಜಾಪ್ರಭುತ್ವ ವಿರೋಧಿ, ಮಾನಗೆಟ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಪೀಕರ್ ಕಾಗೇರಿ ರಾಜ್ಯ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಅಧಿವೇಶನ ನಡೆಸಲು ಇವರಿಗೆ ಅಧಿಕಾರ ಇಲ್ಲವೇ? ಸ್ಪೀಕರ್ ಆದವರು ಪಕ್ಷಾತೀತವಾಗಿ ಕೆಲಸ ಮಾಡಬೇಕು. ಆದರೆ ಇವರು ಮಾಡುತ್ತಿರುವುದು ಏನು? ರಾಜ್ಯ ಸರ್ಕಾರದ ಎಲ್ಲ ಚರ್ಚೆಗಳಿಗೆ ಅವಕಾಶ ಕೊಟ್ಟರು. ಆದರೆ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಕೊಟ್ಟಿಲ್ಲ ಎಂದು ಕಿಡಿಕಾರಿದರು.

NEP ಆರ್ ಎಸ್ ಎಸ್ ನ ಗುಲಾಮರನ್ನಾಗಿ ಮಾಡುವ ನೀತಿ. ಹೀಗಾಗಿ ನಾಗ್ಪುರ ಎಜುಕೇಷನ್ ಪಾಲಿಸಿ ಎಂದಿದ್ದೇವೆ. 116 ಎಕರೆ ಜಾಗ ಕೇವಲ 50 ಕೋಟಿ ರೂ.ಗೆ ಚಾಣಕ್ಯ ವಿವಿಗಾಗಿ ರಾಜ್ಯ ಸರ್ಕಾರ ಕೊಟ್ಟಿದೆ. ಅದು ಮನುವಾದಿಗಳ ವಿಶ್ವವಿದ್ಯಾಲಯವಾಗಲಿದೆ. ಇದರಿಂದ ಸರ್ಕಾರಕ್ಕೆ 350-400 ಕೋಟಿ ನಷ್ಟವಾಗಿದೆ. ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನಡೆಯ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...