ಬೆಂಗಳೂರು: ಅಕ್ಟೋಬರ್ 1 ರಿಂದ ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರೊಂದಿಗೆ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಸಿನಿರಂಗ, ಸಿನಿರಸಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದ್ದು, ಅಕ್ಟೋಬರ್ 1ರಿಂದ ಥಿಯೇಟರ್ ಭರ್ತಿಗೆ ಅಸ್ತು ಎನ್ನಲಾಗಿದೆ.
ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
6 ರಿಂದ 12 ನೇ ತರಗತಿಯ ಮಕ್ಕಳಿಗೆ ಶೇಕಡ 100 ರಷ್ಟು ಹಾಜರಾತಿಯೊಂದಿಗೆ ಭೌತಿಕ ತರಗತಿ ನಡೆಸಲು ಅವಕಾಶ ನೀಡಲಾಗಿದೆ.
ಅಕ್ಟೋಬರ್ 3 ರಿಂದ ಪಬ್ ತೆರೆಯಬಹುದಾಗಿದ್ದು, ಸಿಬ್ಬಂದಿಗೆ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ.