ಬೆಂಗಳೂರು: ರಾತ್ರಿ 9 ಗಂಟೆ ಬದಲು 10 ಗಂಟೆಯಿಂದ ಬೆಳಗಿನಜಾವ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ
ಶೇಕಡ 2 ಕ್ಕಿಂತ ಪಾಸಿಟಿವಿಟಿ ದರ ಹೆಚ್ಚಾದರೆ ಥಿಯೇಟರ್ ಬಂದ್ ಮಾಡಲಾಗುವುದು. ಪಾಸಿಟಿವಿಟಿ ದರ ಶೇಕಡ 1 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರೊಂದಿಗೆ ಸಿನಿಮಾ ಥಿಯೇಟರ್ ಓಪನ್ ಮಾಡಲು ಅವಕಾಶ ನೀಡಲಾಗಿದೆ.
6 ರಿಂದ 12 ನೇ ತರಗತಿಯ ಮಕ್ಕಳಿಗೆ ಶೇಕಡ 100 ರಷ್ಟು ಹಾಜರಾತಿಯೊಂದಿಗೆ ಭೌತಿಕ ತರಗತಿಗಳನ್ನು ನಡೆಸಲಿದ್ದು ವಾರದಲ್ಲಿ 5 ದಿನ ಮಾತ್ರ ಶಾಲಾ-ಕಾಲೇಜು ನಡೆಯಲಿವೆ.
ಸಿನಿಮಾ ಮಂದಿರ, ಪಬ್ ಗಳಿಗೆ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶವಿರಲಿದೆ. ದೇವಾಲಯಗಳಲ್ಲಿ ವಿಶೇಷ ಪೂಜೆ, ಸೇವಾ ಕಾರ್ಯ ಕೈಗೊಳ್ಳುವ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ತೀರ್ಮಾನಿಸಲಿದ್ದಾರೆ. ಕೊರೋನಾ ಸೋಂಕು ಹೆಚ್ಚಿರುವ ಮತ್ತು ಲಸಿಕೆ ನೀಡಿಕೆ ಕಡಿಮೆ ಇರುವ ಜಿಲ್ಲೆಗಳಲ್ಲಿ ಲಸಿಕೆ ನೀಡಿಕೆ ಕಾರ್ಯ ಮತ್ತಷ್ಟು ಚುರುಕುಗೊಳಿಸಲಾಗುವುದು.
ವಿಧಾನಸೌಧದಲ್ಲಿ ಕೋವಿಡ್ ತಾಂತ್ರಿಕ ಸಮಿತಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿನಿಮಾ ಮಂದಿರಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಶಾಲಾ, ಕಾಲೇಜ್ ಗಳಲ್ಲಿ ಶೇಕಡ 100 ರಷ್ಟು ಹಾಜರಾತಿಯೊಂದಿಗೆ 6 -12 ನೇ ತರಗತಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.