ಬೆಂಗಳೂರು: ರಾಜ್ಯದಲ್ಲಿ ಚುರುಕುಗೊಂಡಿರುವ ಮುಂಗಾರು ಇನ್ನೂ ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಧಾರವಾಡ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಹಾಸನ, ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ.