ಬೆಂಗಳೂರು: ನೂತನ ಮರಳು ನೀತಿ ಸಿದ್ಧವಾಗಿದ್ದು, ಸಚಿವ ಸಂಪುಟದ ಮುಂದೆ ಪ್ರಸ್ತಾವನೆ ಇದೆ. ಆದಷ್ಟು ಬೇಗನೆ ಮರಳು ನೀತಿ ಜಾರಿಯಾಗಲಿದೆ ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ಮರಳಿನ ದರ ಗಗನಕ್ಕೇರಿದೆ. 5 ಸಾವಿರದಿಂದ 12 ಸಾವಿರ ರೂಪಾಯಿವರೆಗೆ ದರ ಏರಿಕೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಮರಳು ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ.
ಮರಳಿನ ಸಮಸ್ಯೆ ತೀವ್ರವಾಗಿದ್ದರೂ, ಸರ್ಕಾರ ಪರಿಶೀಲನೆ ಮಾಡಿಕೊಂಡು ಕುಳಿತಿದೆ. ಹೀಗಾದರೆ ಸಮಸ್ಯೆ ಮುಂದುವರೆಯಲಿದೆ ಎಂದು ತಮ್ಮದೇ ಸರ್ಕಾರವನ್ನು ದೂರಿದ್ದಾರೆ. ವೇಳೆ ಪ್ರತಿಕ್ರಿಯೆ ನೀಡಿದ ಸಚಿವ ಹಾಲಪ್ಪ ಆಚಾರ್, ಸಚಿವ ಸಂಪುಟದ ಒಪ್ಪಿಗೆಯೊಂದಿಗೆ ಮರಳು ನೀತಿ ಶೀಘ್ರವೇ ಜಾರಿಗೆ ತರಲಾಗುವುದು. ಹೊಸ ನೀತಿ ಅನುಷ್ಠಾನಕ್ಕೆ ಬಂದಲ್ಲಿ ಕರಾವಳಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಮರಳು ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಹೇಳಿದ್ದಾರೆ.