ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಭಾರತ ಬಂದ್ ಗೆ ಕರೆ ನೀಡಲಾಗಿದ್ದು, ಬಹುತೇಕ ರೈತ ಸಂಘಟನೆಗಳು ಬೆಂಬಲ ನೀಡಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ನಾಳಿನ ಬಂದ್ ಯಶಸ್ವಿಗೆ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತದೆ. ಸುಮನಹಳ್ಳಿ, ಕೆಆರ್ ಪುರಂನಿಂದ ರ್ಯಾಲಿ ನಡೆಸಲಾಗುವುದು. ಸುಮಾರು 8 -10 ಸಾವಿರ ರೈತರು ಭಾಗವಹಿಸಲಿದ್ದಾರೆ. ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ನಾಳೆ ಶಾಂತಿಯುತವಾಗಿ ಪ್ರತಿಭಟನೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ನಾಳಿನ ಬಂದ್ ಗೆ ನೈತಿಕ ಬೆಂಬಲ ಇಲ್ಲ ಎನ್ನುವುದೇ ವಾಸಿ. ಅವರು ನೈತಿಕ ಬೆಂಬಲ ಕೊಟ್ಟರೂ ಅಷ್ಟೆ, ಬಿಟ್ಟರೂ ಅಷ್ಟೆ ಎಂದು ಕೋಡಿಹಳ್ಳಿ ಹೇಳಿದ್ದಾರೆ.
ನಾಳಿನ ಬಂದ್ ಗೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ನೀಡಿವೆ. ಕೋವಿಡ್ ನಂತರ ಈಗಷ್ಟೇ ವ್ಯಾಪಾರ ವಹಿವಾಟು ಚೇತರಿಕೆ ಕಾಣುತ್ತಿರುವುದರಿಂದ ಬಹುತೇಕ ಸಂಘಟನೆಗಳು ನೈತಿಕ ಬೆಂಬಲ ನೀಡಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಜನ, ರೈತರು ಸಮಸ್ಯೆ ಅನುಭವಿಸಿದ್ದಾರೆ. ಎಲ್ಲಾ ಚಟುವಟಿಕೆಗಳಿಗೆ ಧರಣಿನಿರತ ರೈತರು ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ.