ನವದೆಹಲಿ: ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಇಂದು ಸಂಜೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಗಂಟೆಗೆ ಸುಮಾರು 85 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ದಕ್ಷಿಣ ಕರಾವಳಿ ಮತ್ತು ಆಂಧ್ರಪ್ರದೇಶದ ಉತ್ತರ ಕರಾವಳಿ ಪ್ರದೇಶಕ್ಕೆ ‘ಗುಲಾಬ್’ ಚಂಡಮಾರುತ ಅಪ್ಪಳಿಸಲಿದೆ. ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ‘ಗುಲಾಬ್’ ಚಂಡಮಾರುತ ಸೃಷ್ಟಿಯಾಗಿದ್ದು, ಆಂಧ್ರ ಕರಾವಳಿಯ ಉತ್ತರ ಭಾಗದಲ್ಲಿ ಹೆಚ್ಚಿನ ಹಾನಿ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ. ಚಂಡಮಾರುತದ ಅಬ್ಬರದಿಂದ ಭಾರಿ ಮಳೆ, ಭೂಕುಸಿತ, ವಿದ್ಯುತ್ ಸಂಪರ್ಕ ಕಡಿತವಾಗಲಿದೆ. ಬೆಳೆ ಹಾನಿಯಾಗುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗಿದೆ. ಚಂಡಮಾರುತದ ಕಾರಣಕ್ಕೆ ಭಾರತೀಯ ರೈಲ್ವೆ ಹಲವು ಮಾರ್ಗಗಳ ಸಂಚಾರ ರದ್ದು ಮಾಡಿದೆ.