alex Certify ಟೀಂ ಇಂಡಿಯಾ ಇತಿಹಾಸ ಸೃಷ್ಠಿಸಿದ್ದ ‘83’ ರಿಲೀಸ್ ಡೇಟ್ ಫಿಕ್ಸ್, ಕನ್ನಡದಲ್ಲೂ ತೆರೆ ಕಾಣಲಿದೆ ರಣವೀರ್ ಸಿಂಗ್ ಚಿತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಂ ಇಂಡಿಯಾ ಇತಿಹಾಸ ಸೃಷ್ಠಿಸಿದ್ದ ‘83’ ರಿಲೀಸ್ ಡೇಟ್ ಫಿಕ್ಸ್, ಕನ್ನಡದಲ್ಲೂ ತೆರೆ ಕಾಣಲಿದೆ ರಣವೀರ್ ಸಿಂಗ್ ಚಿತ್ರ

ರಣವೀರ್ ಸಿಂಗ್ ಅಭಿನಯದ ‘83’ ಕ್ರಿಸ್‌ಮಸ್‌ ಗೆ ಬಿಡುಗಡೆಯಾಗಲಿದೆ. ಬಹುನಿರೀಕ್ಷಿತ ‘83’ ಚಿತ್ರದ ಬಿಡುಗಡೆಯ ದಿನಾಂಕ ಪ್ರಕಟಿಸಲಾಗಿದ್ದು, ಕ್ರಿಸ್ ಮಸ್ ಗೆ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.

ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿರುವ ಈ ಚಿತ್ರ ಟೀಂ ಇಂಡಿಯಾ ಮೊದಲ ಏಕದಿನ ವಿಶ್ವಕಪ್ ಗೆದ್ದ ಕಥಾಹಂದರ ಹೊಂದಿದೆ.

1983 ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಮೂಲಕ ಟೀಂ ಇಂಡಿಯಾ ಹೇಗೆ ಇತಿಹಾಸ ಸೃಷ್ಟಿಸಿತು ಎನ್ನುವುದರ ಸುತ್ತ ಈ ಚಿತ್ರ ಆಧಾರಿತವಾಗಿದೆ. ರಣವೀರ್ ಭಾರತೀಯ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಪಾತ್ರವನ್ನು ನಿರ್ವಹಿಸುತ್ತಿದ್ದು, ದೀಪಿಕಾ ಅವರ ಪತ್ನಿ ರೋಮಿ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಪಂಕಜ್ ತ್ರಿಪಾಠಿ, ಬೊಮನ್ ಇರಾನಿ, ತಾಹಿರ್ ರಾಜ್ ಭಾಸಿನ್, ಸಾಕಿಬ್ ಸಲೀಂ, ಹರ್ಡಿ ಸಂಧು ಮತ್ತು ಆಮಿ ವಿರ್ಕ್ ಕೂಡ ಅಭಿನಯಿಸಿದ್ದಾರೆ.

38 ವರ್ಷಗಳ ಹಿಂದೆ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಜೂನ್ 25, 1983 ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮರೆಯಲಾರದ ದಿನ. ಕಪಿಲ್ ದೇವ್ ನಾಯಕತ್ವದಲ್ಲಿ ಏಕದಿನ ವಿಶ್ವಕಪ್ ಮೊದಲ ಬಾರಿಗೆ ಜಯಿಸಿತ್ತು. ‘83’ ಈ ಕ್ರಿಸ್ಮಸ್ ಗೆ ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗುತ್ತಿದೆ. ಎಂದು ರಣವೀರ್ ಸಿಂಗ್ ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಚಿತ್ರಮಂದಿರಗಳನ್ನು ತೆರೆಯಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದ ನಂತರ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

https://www.instagram.com/p/CUR0nMlM-P3/

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...