ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಭಾರತ್ ಬಂದ್ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ತಮ್ಮ ಅನಿಸಿಕೆಗಳನ್ನು ಹೆಳಲು ಬೀದಿಗಿಳಿದು ಹೋರಾಟ ನಡೆಸುವ ಅಗತ್ಯವಿಲ್ಲ ಎಂದಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಕೆಲವರು ತಮ್ಮ ಅನಿಸಿಕೆಗಳನ್ನು ಹೇಳುವುದಕ್ಕೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಕೃಷಿ ಕಾಯ್ದೆ ವಿರೋಧಿಸುವವರು ಅದರ ಮೂಲ ಉದ್ದೇಶವನ್ನು ಅರ್ಥೈಸಿಕೊಂಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕೃಷಿ ಕಾಯ್ದೆಯನ್ನು ಜಾರಿಗೆ ತಂದೆವು. ರೈತರ ಹಿತಕ್ಕಾಗಿಯೇ ಕಾಯ್ದೆ ಜಾರಿ ತರಲಾಯಿತು. ಆದರೆ ಇವರು ಚಳುವಳಿಗಾಗಿ ಚಳುವಳಿ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.