ಕೋ ಆಪರೇಟಿವ್ ಬ್ಯಾಂಕ್ ಭ್ರಷ್ಟಾಚಾರ ಸಂಬಂಧ ಜಾರಿ ನಿರ್ದೇಶನಾಲಯ ಶಿವಸೇನೆಯ ನಾಯಕ ಹಾಗೂ ಮಾಜಿ ಸಂಸದ ಆನಂದರಾವ್ ಅಡ್ಸುಲ್ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಆನಂದ್ರಾವ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಅಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಶಿವಸೇನೆ ಮುಖಂಡ ಆನಂದ್ ರಾವ್ ಅಡ್ಸುಲ್ಗೆ ನೋಟಿಸ್ ನೀಡಿತ್ತು. ಆದರೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಗುರುಗಾಂವ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೋ ಆಪರೇಟಿವ್ ಬ್ಯಾಂಕಿನಲ್ಲಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಅಡ್ಸುಲ್ ಮೇಲೆ ಇಡಿ ಕಣ್ಣಿಟ್ಟಿದೆ. ಅಡ್ಸುಲ್ ಈ ಹಿಂದೆ ಅಮರಾವತಿ ಕ್ಷೇತ್ರದ ಮೂಲಕ ಸಂಸದರಾಗಿ ಆಯ್ಕೆಯಾಗಿದ್ದರು.