ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ದುರಂತ ಸಂಭವಿಸುತ್ತಿದ್ದು, ಇದೀಗ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತಗೊಂಡಿದೆ.
ಡೇರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾಟ್ರರ್ಸ್ ನಲ್ಲಿರುವ 3 ಅಂತಸ್ತಿನ ಕಟ್ಟಡ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಿದೆ. 50 ವರ್ಷಗಳಷ್ಟು ಹಳೆಯದಾದ ಕಟ್ಟಡ ಇದಾಗಿದ್ದು, ಸದ್ಯ ಯಾರೂ ವಾಸವಾಗಿರಲಿಲ್ಲ ಎನ್ನಲಾಗಿದೆ. ಹಾಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಕಟ್ಟಡ ಕುಸಿತದ ರಭಸಕ್ಕೆ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯುಂಟಾಗಿದೆ.