ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಯ್ ಫ್ರೆಂಡ್ ವಿವೇಕ್ ಮತ್ತು ಸವಿ ಅವರಿಗೆ ಮೇಕಪ್ ಮ್ಯಾನ್ ಆಗಿದ್ದ ಮಹೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಕುಂಬಳಗೋಡು ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸವಿ ಅವರ ತಂದೆ ಪ್ರಭು ಮಾದಪ್ಪ ಅವರು ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ.
ಐಪಿಸಿ ಸೆಕ್ಷನ್ 306 ರ ಅಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಇಬ್ಬರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಬೆಂಗಳೂರಿನ ಆರ್.ಆರ್. ಆಸ್ಪತ್ರೆಯಲ್ಲಿ ಇಂದು ಮರಣೋತ್ತರ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬಳಿಕ ಕುಟುಂಬದವರಿಗೆಮೃತದೇಹ ಹಸ್ತಾಂತರ ಮಾಡಲಿದ್ದು, ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಅಂದಗೋವೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಹೇಳಲಾಗಿದೆ.