ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿ, ಕಲ್ಯಾಣ ಕರ್ನಾಟಕ ಪ್ರದೇಶ(ಸ್ಥಳೀಯ) ವೃಂದದ ಹುದ್ದೆಗಳು ಸೇರಿದಂತೆ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಶಿಕ್ಷಣಶಾಸ್ತ್ರ, ಕಾನೂನು, ಸಮಾಜಕಾರ್ಯ, ಭೂಗೋಳಶಾಸ್ತ್ರ, ಭೂಗರ್ಭಶಾಸ್ತ್ರ, ವಾಣಿಜ್ಯಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಶಾಸ್ತ್ರ, ಸೂಕ್ಷ್ಮಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್, ಗಣಕವಿಜ್ಞಾನ, ಸಂಖ್ಯಾಶಾಸ್ತ್ರ, ಫ್ಯಾಷನ್ ಟೆಕ್ನಾಲಜಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವೇತನಶ್ರೇಣಿ ಯುಜಿಸಿ ವೇತನ ಶ್ರೇಣಿ 57,700 ರೂ. – 1,82,400 ರೂ.
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 22 ವರ್ಷ ಹಾಗೂ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 40 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷ ಹಾಗೂ ಸೇವೆಯಲ್ಲಿರುವವರಿಗೆ ಸಡಿಲಿಕೆ ನೀಡಲಾಗುವುದು.
ಪ್ರಾಧಿಕಾರದ ವೆಬ್ಸೈಟ್ ಮೂಲಕ ಅಕ್ಟೋಬರ್ ಬೆಳಗ್ಗೆ 7 ರಿಂದ ಅರ್ಜಿ ಸಲ್ಲಿಸಬಹುದು. ನವೆಂಬರ್ 6 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿರುತ್ತದೆ. ಅರ್ಜಿ ಶುಲ್ಕ ಪಾವತಿಗೆ ನವೆಂಬರ್ 10 ಕೊನೆಯ ದಿನ. ಡಿಸೆಂಬರ್ ಮೂರನೇ ಅಥವಾ ನಾಲ್ಕನೇ ವಾರದ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು.
ಸಾಮಾನ್ಯ ವರ್ಗದ ಹಾಗೂ ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 2000 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 1000 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅಂಗವಿಕಲ ವ್ಯಕ್ತಿಗಳಿಗೆ ಶುಲ್ಕ ವಿನಾಯಿತಿ ಇದೆ.
ಕನ್ನಡ 107, ಇಂಗ್ಲಿಷ್ 84, ಇತಿಹಾಸ 109, ಅರ್ಥಶಾಸ್ತ್ರ 172 ಸೇರಿದಂತೆ 1242 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಮತ್ತು ಮಾಹಿತಿಗಾಗಿ http://kea.kar.nic.in ವೆಬ್ಸೈಟ್ ಗಮನಿಸಬಹುದು.