
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 22 ರಿಂದ 30 ಪೈಸೆಯಷ್ಟು ಹೆಚ್ಚಳವಾಗಿದೆ. ಅದೇ ರೀತಿ ಡೀಸೆಲ್ ದರ ಪ್ರತಿ ಲೀಟರ್ ಗೆ 29 ರಿಂದ 32 ಪೈಸೆಯಷ್ಟು ಹೆಚ್ಚಳವಾಗಿದೆ.
ಗುರುವಾರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿತ್ತು. ಶುಕ್ರವಾರ ಕೂಡ ಹೆಚ್ಚಳ ಮಾಡಲಾಗಿದ್ದು, ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಿದೆ.
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 101.89 ರೂ., ಡೀಸೆಲ್ ದರ 90.17 ರೂ. ಇದೆ
ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 107.95 ರೂ., ಡೀಸೆಲ್ 97.84 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ 105.44 ರೂ., ಡೀಸೆಲ್ ದರ 95.70 ರೂ. ಇದೆ.