ತಿಂಗಳ ಮೊದಲ ದಿನವೇ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಪೆಟ್ರೋಲ್-ಡಿಸೇಲ್ ಬೆಲೆ ಮಧ್ಯೆ ಈ ತಿಂಗಳು ಮತ್ತೆ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಅನಿಲ ಕಂಪನಿಗಳು, ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿವೆ. ವಾಣಿಜ್ಯ ಸಿಲಿಂಡರ್ಗಳ ಬೆಲೆ 43.5 ರೂಪಾಯಿಗಳಷ್ಟು ಹೆಚ್ಚಾಗಿದೆ. ಈ ಬೆಲೆ ಎಚ್ಚಳದಿಂದ ರೆಸ್ಟೋರೆಂಟ್, ಹೊಟೇಲ್ ಆಹಾರಗಳು ದುಬಾರಿಯಾಗುವ ಸಾಧ್ಯತೆಯಿದೆ.
ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಹೊಸ ದರಗಳ ಪ್ರಕಾರ, ಈಗ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1736.5 ರೂಪಾಯಿಯಾಗಿದೆ. ಹಿಂದಿನ ತಿಂಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1693 ರೂಪಾಯಿಯಿತ್ತು. ದೇಶೀಯ ಬಳಕೆಗಾಗಿ 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1805.5 ರೂಪಾಯಿಯಾಗಿದೆ. ಪೆಟ್ರೋಲಿಯಂ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪರಿಶೀಲಿಸುತ್ತವೆ. ಈ ಹಿಂದೆ ಸೆಪ್ಟೆಂಬರ್ 1 ರಂದು ಎಲ್ಪಿಜಿ ಸಿಲಿಂಡರ್ ಬೆಲೆ 25 ರೂಪಾಯಿ ಹೆಚ್ಚಾಗಿತ್ತು. ಈ ತಿಂಗಳು ದೇಶೀಯ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.