alex Certify BIG NEWS: ಅಧಿಕಾರಿಗಳ ಸ್ವಾತಂತ್ರ್ಯಕ್ಕೆ ಕಡಿವಾಣ; ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಂತಿಲ್ಲ ಎಂದ ರಾಜ್ಯ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಧಿಕಾರಿಗಳ ಸ್ವಾತಂತ್ರ್ಯಕ್ಕೆ ಕಡಿವಾಣ; ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಂತಿಲ್ಲ ಎಂದ ರಾಜ್ಯ ಸರ್ಕಾರ

ಬೆಂಗಳೂರು: ಒಬ್ಬ ಅಧಿಕಾರಿ ಮೇಲೆ ಇನ್ನೊಬ್ಬ ಅಧಿಕಾರಿ ಆರೋಪ ಮಾಡಿ ಸುದ್ದಿಗೋಷ್ಠಿ ನಡೆಸುವಂತಿಲ್ಲ, ಇಲಾಖೆಗೆ ಸಂಬಂಧಿಸಿದ ವಿಚಾರಗಳನ್ನು ಅಧಿಕಾರಿಗಳು ಮಾಧ್ಯಮಗಳ ಮುಂದೆ ಬಾಯ್ಬಿಡುವಂತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಾಕೀತು ಮಾಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಸಚಿವ ಆರ್. ಅಶೋಕ್, ಇನ್ಮುಂದೆ ಯಾವುದೇ ಅಧಿಕಾರಿಗಳು ಪರಸ್ಪರ ಜಗಳ ಮಾಡಿಕೊಂಡು ಮಾಧ್ಯಮಗಳ ಮುಂದೆ ಬಂದು ಹೇಳಿಕೆ ನೀಡುವಂತಿಲ್ಲ. ಯಾವುದೇ ವಿಚಾರಗಳ ಬಗ್ಗೆ ಸುದ್ದಿಗೋಷ್ಠಿ ನಡೆಸುವಂತಿಲ್ಲ. ಸರ್ಕಾರಕ್ಕೆ ಮುಜುಗರವುಂಟಾಗುವ ಕೆಲಸವನ್ನು ಅಧಿಕಾರಿಗಳು ಮಾಡಬಾರದು. ಇಲಾಖೆಗಳಿಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲು, ಮಾಹಿತಿ ತಿಳಿಸಲು ಆಯಾ ಇಲಾಖೆ ಸಚಿವರುಗಳಿದ್ದಾರೆ ಎಂದು ಖಡಕ್ ಆಗಿ ಎಚ್ಚರಿಸಿದ್ದಾರೆ.

ಅಚ್ಚರಿಗೆ ಕಾರಣವಾಗಿದೆ ಐಸ್‌ ಕ್ರೀಂ ಕಡ್ಡಿಯಲ್ಲಿರುವ ಇಡ್ಲಿ…!

ಮೈಸೂರಿನಲ್ಲಿ ನಡೆದ ಮಹಿಳಾ ಅಧಿಕಾರಿಗಳ ನಡುವಿನ ಜಟಾಪಟಿ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಧಿಕಾರಿಗಳ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದ್ದು, ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸುವ ಮುನ್ನ ಅನುಮತಿ ಪಡೆದಿರಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...