ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯನ್ನಾಗಿ ನಾಜಿಯಾ ಶಕೀಲಾ ಅಂಗಡಿ ಅವರನ್ನು ಆಯ್ಕೆ ಮಾಡಿದ್ದಾರೆ.
ನಾಜಿಯಾ ಶಕೀಲಾ ಅಂಗಡಿ ಅವರು MA, B.ed ಪದವೀಧರರಾಗಿದ್ದು, ಜೆಡಿಎಸ್ ಪಕ್ಷದಲ್ಲಿ ಸಕ್ರಿಯರಾಗಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ಸಮಾಜಮುಖಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ನಾಜಿಯಾ ಶಕೀಲಾ ಅಂಗಡಿ ಅವರು ಅತ್ಯುತ್ತಮ ಅಭ್ಯರ್ಥಿ ಆಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ.
ಪಕ್ಷನಿಷ್ಠೆಯ ಜತೆಗೆ ಪ್ರಾಮಾಣಿಕ ಹಾಗೂ ಸೇವಾ ಮನೋಭಾವ ಹೊಂದಿರುವ ನಾಜಿಯಾ ಶಕೀಲಾ ಅಂಗಡಿ ಅವರನ್ನು ಸಮಸ್ತ ಸಿಂಧಗಿ ಮತದಾರರು ಆಶೀರ್ವದಿಸಿ ಆಯ್ಕೆ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.
ಈಗಾಗಲೇ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಯನ್ನಾಗಿ Be, M tech ಪದವೀಧರರಾಗಿರುವ ನಿಯಾಜ್ ಶೇಕ್ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಆಯ್ಕೆ ಮಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಉತ್ತಮ ಶಿಕ್ಷಣ ಪಡೆದಿರುವ ವಿದ್ಯಾವಂತರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ಜನರು ಜೆಡಿಎಸ್ ಅಭ್ಯರ್ಥಿಗಳಿಗೆ ಮತ ನೀಡಿ ಆಶೀರ್ವಾದ ಮಾಡಬೇಕು ಎಂದು ಅವರು ಕೋರಿದ್ದಾರೆ.