ಬೆಂಗಳೂರು: ಪಂಜಾಬ್ ನಲ್ಲಿ ದಲಿತ ಮುಖ್ಯಮಂತ್ರಿ ಆಯ್ಕೆ ಮಾಡಿರುವ ಕುರಿತಂತೆ ರಾಜ್ಯದಲ್ಲಿಯೂ ದಲಿತ ಸಿಎಂ ಬೇಕೆಂಬ ಬೇಡಿಕೆ ಕೇಳಿಬಂದಿದೆ.
ಚುನಾವಣೆಗೆ ಇನ್ನೂ ಬಹುದೂರ ಉಳಿದಿರುವಾಗಲೇ ಇಂತಹುದೊಂದು ಚರ್ಚೆ ಶುರುವಾಗಿದೆ. ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು, ರಾಜ್ಯದಲ್ಲಿಯೂ ದಲಿತ ಮುಖ್ಯಮಂತ್ರಿ ಮಾಡುವಂತೆ ಕೇಳಬಹುದು ಎಂದು ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್ ರೀತಿ ರಾಜ್ಯದಲ್ಲಿಯೂ ಮುಂದಿನ ಬಾರಿ ಕಾಂಗ್ರೆಸ್ ಬಹುಮತ ಪಡೆದರೆ ದಲಿತ ಮುಖ್ಯಮಂತ್ರಿ ಬೇಡಿಕೆ ಕೇಳಬಹುದು. ಆದರೆ, ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಮೊದಲ ಆದ್ಯತೆ ಎಂದು ಅವರು ಹೇಳಿದ್ದಾರೆ.
ಪರಮೇಶ್ವರ್ ಅವರು ನೀಡಿದ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹಲವರು ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಈಗಾಗಲೇ ಇಂಗಿತ ಕೂಡ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಪರಮೇಶ್ವರ್ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ.