ಮೈಸೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಚಿಂತನೆ ಇದೆ. ಮುಂದಿನ ವರ್ಷದಿಂದಲೇ ಎನ್ಇಪಿ ಜಾರಿಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಮದನಗೋಪಾಲ್ ಅವರ ನೇತೃತ್ವದಲ್ಲಿ ಶಾಲಾ ಹಂತದಿಂದಲೇ ಎನ್ಇಪಿ ಜಾರಿಗೆ ತರಲು ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಒಂದನೇ ತರಗತಿಯಿಂದ ಪಿಯುಸಿವರೆಗೆ ನಾಲ್ಕು ಹಂತಗಳ ಶಿಕ್ಷಣಕ್ಕೆ ಪಠ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.